Deuteronomy 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
Kannada BSI Bible 2016
ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ನೋಡೇ ಇದ್ದೀರಷ್ಟೆ; ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದನಲ್ಲಾ;
Kannada Bible (KNCL) BSI 2016
ಪೆಗೋರದ ಬಾಳ್ ದೇವತೆಯ ವಿಷಯದಲ್ಲಿ ಸರ್ವೇಶ್ವರ ಮಾಡಿದ ಕಾರ್ಯವನ್ನು ನೀವು ನೋಡಿದ್ದೀರಷ್ಟೆ; ಆ ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆಯಿಂದ ನಾಶಮಾಡಿದರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?