Deuteronomy 4:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.
Kannada BSI Bible 2016
ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.