Deuteronomy 4:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
Kannada BSI Bible 2016
ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
Kannada Bible (KNCL) BSI 2016
ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.