Deuteronomy 4:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.
Kannada BSI Bible 2016
ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇವಿುಸಿದನು.
Kannada Bible (KNCL) BSI 2016
ಪೂರ್ವಕಲ್ಪಿತ ಯಾವ ದ್ವೇಷವೂ ಇಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ನಗರಗಳನ್ನು ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಹಗೆಯಿಲ್ಲದೆ ತನ್ನ ನೆರೆಯವನನ್ನು ಕೈತಪ್ಪಿ ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳುವಂತೆ ಆ ನಗರಗಳನ್ನು ನೇಮಿಸಿದನು.