Deuteronomy 4:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಹೋನನ ರಾಜ್ಯವನ್ನು ಅವರು ತಮ್ಮ ಉಪಯೋಗಕ್ಕಾಗಿ ಸ್ವಾಧೀನ ಮಾಡಿಕೊಂಡರು, ಬಾಷಾನಿನ ರಾಜನಾದ ಓಗನ ರಾಜ್ಯವನ್ನು ತಮ್ಮ ಸ್ವಾಧೀನಪಡಿಸಿಕೊಂಡರು. ಅಮೋರಿಯರಾದ ಈ ಇಬ್ಬರು ರಾಜರುಗಳು ಜೋರ್ಡನ್ ನದಿಯ ಪೂರ್ವದಲ್ಲಿ ವಾಸವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.
Kannada BSI Bible 2016
ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಯೊರ್ದನ್ ಹೊಳೆಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಮತ್ತು
Kannada Bible (KNCL) BSI 2016
ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸ ಓಗನ ರಾಜ್ಯವನ್ನೂ ಜೋರ್ಡನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನೂ ಗೆದ್ದುಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಆಚೆಯಲ್ಲಿ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಗೆದ್ದುಕೊಂಡರು.