Deuteronomy 4:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.
Kannada BSI Bible 2016
ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬದ ಸಮುದ್ರದವರೆಗೆ ಯೊರ್ದನ್ ಹೊಳೆಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.)
Kannada Bible (KNCL) BSI 2016
ಅರಾಬ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿ ಇರುವ ಅರಾಬದ ಸಮುದ್ರದವರೆಗೆ ಜೋರ್ಡನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿ ಇರುವ ಎಲ್ಲಾ ಅರಾಬಾದನ್ನು ಸಹ, ಪಿಸ್ಗಾದ ಬೆಟ್ಟದ ತಗ್ಗಿನಲ್ಲಿರುವ ಬಯಲಿನ ಸಮುದ್ರದವರೆಗೆ ಸ್ವಾಧೀನಮಾಡಿಕೊಂಡರು.