Deuteronomy 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
Kannada BSI Bible 2016
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.
Kannada Bible (KNCL) BSI 2016
ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.