Deuteronomy 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
Kannada BSI Bible 2016
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
Kannada Bible (KNCL) BSI 2016
ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.