Deuteronomy 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
Kannada BSI Bible 2016
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.
Kannada Bible (KNCL) BSI 2016
‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು, ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.