Deuteronomy 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
Kannada BSI Bible 2016
ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್‌ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು ಹೆಣ್ಣುಮಕ್ಕಳು ಗಂಡಾಳು ಹೆಣ್ಣಾಳು ಎತ್ತು ಕತ್ತೆ ಪಶುಗಳು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿದೊರೆಯಬೇಕು.
Kannada Bible (KNCL) BSI 2016
ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.