Deuteronomy 5:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.
Kannada BSI Bible 2016
ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.
Kannada Bible (KNCL) BSI 2016
‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ.