Deuteronomy 5:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.
Kannada BSI Bible 2016
ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.
Kannada Bible (KNCL) BSI 2016
ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.