Deuteronomy 5:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
Kannada BSI Bible 2016
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಎಷ್ಟೋ ಮೇಲು; ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವದು.
Kannada Bible (KNCL) BSI 2016
ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”