Deuteronomy 5:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
Kannada BSI Bible 2016
ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನೀನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು ಎಂದು ಹೇಳಿದನು.
Kannada Bible (KNCL) BSI 2016
ನೀನು ಇಲ್ಲೇ ನನ್ನ ಬಳಿ ಇರು; ಅವರಿಗೆ ಬೋಧಿಸಬೇಕಾದ ಎಲ್ಲ ಆಜ್ಞೆಗಳನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ನಾಡಿನಲ್ಲಿ ಅವರು ಅವುಗಳನ್ನು ಅನುಸರಿಸಬೇಕು,’ ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನಾದರೋ ಇಲ್ಲಿ ನನ್ನ ಸಂಗಡ ನಿಂತುಕೋ. ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸೊತ್ತಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞಾನಿಯಮ ಮತ್ತು ನ್ಯಾಯಗಳನ್ನು ನಿಮಗೆ ಹೇಳುವೆನು.”