Deuteronomy 5:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
Kannada BSI Bible 2016
ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
Kannada Bible (KNCL) BSI 2016
“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.