Deuteronomy 5:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.
Kannada BSI Bible 2016
ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.
Kannada Bible (KNCL) BSI 2016
ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.