Deuteronomy 6:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನದಂತೆ ನಮಗೆ ಆ ದೇಶವನ್ನು ಕೊಡುವುದಕ್ಕಾಗಿ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.
Kannada BSI Bible 2016
ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು;
Kannada Bible (KNCL) BSI 2016
ನಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ನಾಡಿಗೆ ನಮ್ಮನ್ನು ಸೇರಿಸುವುದಕ್ಕೆ ಈಜಿಪ್ಟಿನಿಂದ ನಮ್ಮನ್ನು ಬರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು.