Deuteronomy 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
Kannada BSI Bible 2016
ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
Kannada Bible (KNCL) BSI 2016
ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.