Deuteronomy 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.
Kannada BSI Bible 2016
ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ
Kannada Bible (KNCL) BSI 2016
“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.