Deuteronomy 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎಲ್ಲಾ ಜನರಿಗಿಂತ ನೀವು ಹೆಚ್ಚಾಗಿ ಆಶೀರ್ವದಿಸಲ್ಪಡುವಿರಿ. ಪ್ರತಿಯೊಂದು ಕುಟುಂಬದಲ್ಲಿ ಹೆಚ್ಚು ಮಕ್ಕಳಿರುವರು. ನಿಮ್ಮ ಹಸುಗಳು ಮರಿಗಳನ್ನು ಈಯುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
Kannada BSI Bible 2016
ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವದಿಲ್ಲ.
Kannada Bible (KNCL) BSI 2016
ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಜನರಿಗಿಂತಲೂ ನೀವು ಆಶೀರ್ವಾದಕ್ಕೆ ಪಾತ್ರರಾಗಿರುವಿರಿ. ನಿಮ್ಮೊಳಗೆ ಸ್ತ್ರೀ ಪುರುಷರಲ್ಲಾಗಲಿ, ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.