Deuteronomy 7:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೊರಡಿಸಲು ಸಾಧ್ಯವೇ ಎಂದು ಯಾಕೆ ಅಂದುಕೊಳ್ಳುತ್ತೀರಿ.‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.
Kannada BSI Bible 2016
ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನಗಳು ನಮಗಿಂತ ಹೆಚ್ಚು ಮಂದಿ; ಅವರನ್ನು ಹೊರಡಿಸುವದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ;
Kannada Bible (KNCL) BSI 2016
‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ?