Deuteronomy 7:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿಹೋಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
Kannada BSI Bible 2016
ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಎದುರಿನಿಂದ ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವನು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡಾವು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು.