Deuteronomy 7:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.
Kannada BSI Bible 2016
ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರ ಅರಸುಗಳನ್ನು ನಿಮ್ಮ ಕೈಗೆ ಸಿಕ್ಕುವಂತೆ ಮಾಡಲಾಗಿ ನೀವು ಅವರ ಹೆಸರುಗಳೇ ಭೂವಿುಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ; ಎಲ್ಲರನ್ನೂ ನಾಶಮಾಡುವಿರಿ.
Kannada Bible (KNCL) BSI 2016
ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು.