Deuteronomy 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.
Kannada BSI Bible 2016
ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಯೆಹೋವನ ಸೇವೆಯಿಂದ ತಪ್ಪಿಸಿ ಇತರ ದೇವರುಗಳನ್ನು ಪೂಜಿಸುವದಕ್ಕೆ ತಿರುಗಿಸಾರು; ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶ ಮಾಡುವನು.
Kannada Bible (KNCL) BSI 2016
ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು.