Deuteronomy 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
Kannada BSI Bible 2016
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.
Kannada Bible (KNCL) BSI 2016
ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.