Deuteronomy 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರಾರು ತಲೆಮಾರುಗಳವರೆಗೂ ಮುಂದುವರಿಯುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
Kannada BSI Bible 2016
ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ
Kannada Bible (KNCL) BSI 2016
ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.