Deuteronomy 8:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
Kannada BSI Bible 2016
ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚಿ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
Kannada Bible (KNCL) BSI 2016
“ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.