Deuteronomy 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.
Kannada BSI Bible 2016
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.
Kannada Bible (KNCL) BSI 2016
“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.