Deuteronomy 8:16 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
Kannada BSI Bible 2016
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.