Deuteronomy 8:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
Kannada BSI Bible 2016
ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
Kannada Bible (KNCL) BSI 2016
ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.