Deuteronomy 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
Kannada BSI Bible 2016
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.