Deuteronomy 8:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಿಮಗೋಸ್ಕರ ಇತರ ಜನಾಂಗಗಳನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಡದೆ ಅನ್ಯದೇವರುಗಳನ್ನು ಅನುಸರಿಸುವುದಾದರೆ ನೀವೂ ಅವರಂತೆ ನಾಶವಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.
Kannada BSI Bible 2016
ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ಆತನಿಂದ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಜನಾಂಗಗಳಂತೆಯೇ ನೀವೂ ನಾಶವಾಗಿ ಹೋಗುವಿರಿ.
Kannada Bible (KNCL) BSI 2016
ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.