Deuteronomy 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.
Kannada BSI Bible 2016
ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು
Kannada Bible (KNCL) BSI 2016
ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.