Deuteronomy 9:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗವನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
Kannada BSI Bible 2016
ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.
Kannada Bible (KNCL) BSI 2016
“ಇಸ್ರಯೇಲರೇ ಕೇಳಿ: ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.