Deuteronomy 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದಿರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.
Kannada BSI Bible 2016
ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡು ಬಂತು.
Kannada Bible (KNCL) BSI 2016
ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ.