Deuteronomy 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಬಳಿಯಲ್ಲಿದ್ದ ಆ ಕಲ್ಲಿನ ಹಲಗೆಗಳನ್ನು ನಾನು ನೆಲಕ್ಕೆ ಅಪ್ಪಳಿಸಿದೆನು. ನಿಮ್ಮ ಕಣ್ಣೆದುರಿನಲ್ಲಿ ಅವುಗಳನ್ನು ತುಂಡುತುಂಡಾಗಿ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.
Kannada BSI Bible 2016
ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದು ಬಿಟ್ಟೆನು.
Kannada Bible (KNCL) BSI 2016
ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮ್ಮ ಎದುರಿನಲ್ಲಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಆ ಎರಡು ಹಲಗೆಗಳನ್ನು ತೆಗೆದುಕೊಂಡು ನನ್ನ ಕೈಯಿಂದ ಬಿಸಾಡಿ, ನಿಮ್ಮ ಮುಂದೆ ಒಡೆದು ಹಾಕಿದೆನು.