Deuteronomy 9:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
Kannada BSI Bible 2016
ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ.
Kannada Bible (KNCL) BSI 2016
ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ.