Deuteronomy 9:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಆರೋನನನ್ನು ನಾಶಪಡಿಸುವಷ್ಟು ಕೋಪೋದ್ರಿಕ್ತನಾಗಿದ್ದನು. ನಾನು ಅವನಿಗಾಗಿ ಪ್ರಾರ್ಥಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.
Kannada BSI Bible 2016
ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದದರಿಂದ ನಾನು ಅವನಿಗೋಸ್ಕರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆನು.
Kannada Bible (KNCL) BSI 2016
ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನನ್ನು ನಾಶಮಾಡುವಂತೆ ಯೆಹೋವ ದೇವರು ಅವನ ಮೇಲೆಯೂ ಬಹಳ ಕೋಪಗೊಂಡರು. ಆದ್ದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆ ಮಾಡಿದೆನು.