Deuteronomy 9:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.
Kannada BSI Bible 2016
ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು.
Kannada Bible (KNCL) BSI 2016
ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.