Deuteronomy 9:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
Kannada BSI Bible 2016
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಕಾದೇಶ್‍ಬರ್ನೇಯದಲ್ಲಿ ಯೆಹೋವನು ನಿಮಗೆ - ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ ಆತನನ್ನು ನಂಬದೆ ಆತನ ಮಾತನ್ನು ಅಲಕ್ಷ್ಯಮಾಡಿದಿರಿ.
Kannada Bible (KNCL) BSI 2016
ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿ, “ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ,” ಎಂದು ಹೇಳಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ನಂಬಲಿಲ್ಲ. ಅವರ ಮಾತನ್ನೂ ಕೇಳಲಿಲ್ಲ.