Deuteronomy 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಯೆಹೋವನ ಮುಂದೆ ನಲವತ್ತು ದಿನ ಹಗಲಿರುಳು ಬೋರಲಬಿದ್ದು ಆತನು ನಾಶಮಾಡಬೇಕೆಂದಿದ್ದ ನಿಮಗಾಗಿ ಪ್ರಾರ್ಥಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
Kannada BSI Bible 2016
ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
Kannada Bible (KNCL) BSI 2016
“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು.