Deuteronomy 9:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೊ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
Kannada BSI Bible 2016
ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.
Kannada Bible (KNCL) BSI 2016
ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.