Deuteronomy 9:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
Kannada BSI Bible 2016
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.