Deuteronomy 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
Kannada BSI Bible 2016
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
Kannada Bible (KNCL) BSI 2016
ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.