Deuteronomy 9:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇವರಾದ ಯೆಹೋವನು ಆ ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹಠಮಾರಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.
Kannada BSI Bible 2016
ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ.