Deuteronomy 9:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
Kannada BSI Bible 2016
ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
Kannada Bible (KNCL) BSI 2016
ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.