Ecclesiastes 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
Kannada BSI Bible 2016
ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.
Kannada Bible (KNCL) BSI 2016
ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.