Ecclesiastes 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಏಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.
Kannada BSI Bible 2016
ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮನಸ್ಸಿನಲ್ಲಿ ಯೋಚಿಸುತ್ತಾ - ಆಹಾ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ; ನನ್ನ ಹೃದಯವು ಜ್ಞಾನವನ್ನೂ ತಿಳುವಳಿಕೆಯನ್ನೂ ವಿಶೇಷವಾಗಿ ಹೊಂದಿದೆ ಎಂದುಕೊಂಡೆನು.
Kannada Bible (KNCL) BSI 2016
ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”