Ecclesiastes 10:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾವುಗಳನ್ನು ಹಿಡಿಯಬಲ್ಲವನು ಇಲ್ಲದಿರುವಾಗ ಹಾವು ಬೇರೊಬ್ಬನನ್ನು ಕಚ್ಚಿದರೆ ಹಾವು ಹಿಡಿಯುವವನಿಂದ ಪ್ರಯೋಜನವೇನು? ಜ್ಞಾನವು ಸಹ ಹಾಗೆಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
Kannada BSI Bible 2016
ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಂತ್ರಿಸಿ ತಡೆಯುವದರೊಳಗಾಗಿ ಹಾವು ಕಚ್ಚಿದರೆ ಮಂತ್ರಿಸುವವನಿಗೆ ಏನು ಪ್ರಯೋಜನ?
Kannada Bible (KNCL) BSI 2016
ಹಾವಾಡಿಗ ಹಾವಾಡಿಸುವುದಕ್ಕೆ ಮುಂಚೆಯೇ ಹಾವಿನಿಂದ ಕಡಿಸಿಕೊಂಡರೆ ಏನು ಪ್ರಯೋಜನ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?