Ecclesiastes 10:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೊ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
Kannada BSI Bible 2016
ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
Kannada Bible (KNCL) BSI 2016
ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.